Ad imageAd image

ಹುನಗುಂದ ಬಳಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು 

Bharath Vaibhav
WhatsApp Group Join Now
Telegram Group Join Now

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತವಾಗಿದ್ದು, ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಹುನುಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಲಕ್ಷ್ಮಣ ವಡ್ಡರ್ (55) ಬೈಲಪ್ಪ ಬಿರಾದಾರ್ (45),ರಾಮಣ್ಣ ನಾಯಕ(50), ಕಾರು ಚಾಲಕ ರಫೀಕ್ ಮುಲ್ಲಾ (25) ಎಂದು ಗುರುತಿಸಲಾಗಿದೆ.

ಮುದ್ದೇಬಿಹಾಳದ ಕಡೆ ಹೊರಟ್ಟಿದ್ದ ಕಾರು ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ನಿದ್ದೆ ಮಂಪರಿನಿಂದ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!