ತುಮಕೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಹಸೀನಾ ತಾಜ್ (35), ಅಫೀಜ್ (8), ಅಲ್ಕೀಜ್ (4) ಆತ್ಮಹತ್ಯೆ ಮಾಡಿಕೊಂಡವರು. ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಪುರ ಕೆರೆಯಲ್ಲಿ ಘಟನೆ ನಡೆದಿದೆ.ಹಸೀನಾ ತಾಜ್ ಮಧುಗಿರಿ ಪಟ್ಟಣದಲ್ಲಿ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದರು.
ಇಂದು ಮಧುಗಿರಿ ಬಳಿಯಿರುವ ಸಿದ್ದಪುರ ಕೆರೆಗೆ ತನ್ನ ಇಬ್ಬರು ಮಕ್ಕಳ ಜೊತೆ ಕೆರೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಭೇಟಿ ನೀಡಿದ ಮಧುಗಿರಿ ಪೊಲೀಸರು ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.