Ad imageAd image

ಮುಡಾ ಹಗರಣ : ಇಂದು ಸಿದ್ದರಾಮಯ್ಯ ಹಾಗೂ ಕುಟುಂಬಸ್ಥರ ಮೇಲೆ ಎಫ್‌ಐಆರ್ ಸಾಧ್ಯತೆ 

Bharath Vaibhav
WhatsApp Group Join Now
Telegram Group Join Now

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಕುಟುಂಬಸ್ಥರ ವಿರುದ್ಧ ಎಫ್ ಐಆರ್ ದಾಖಲಾಗುವ ಸಾಧ್ಯತೆ ಇದೆ.

ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವ ಸಾಧ್ಯತೆ ಇದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದ್ದು, ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ2, ಪತ್ನಿ ಸಹೋದರ ಮಲ್ಲಿಕಾರ್ಜನ್ ಸ್ವಾಮಿ ಎ3, ಜಮೀನು ಮಾರಿದ ದೇವರಾಜು ಎ4 ಹಾಗೂ ಇತರರ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಲಾಗಿದೆ.

ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿ ಉದೇಶ್ ಗುರುವಾರ ಬೆಂಗಳೂರಿಗೆ ಆಗಮಿಸಿ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರತಿಗಳನ್ನು ಅಧಿಕೃತವಾಗಿ ಪಡೆದುಕೊಂಡು ಲೋಕಾಯುಕ್ತ ಪ್ರಧಾನ ಕಚೇರಿಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಅಲ್ಲದೇ, ಲೋಕಾಯುಕ್ತ ಕಾನೂನು ಸಲಹೆಗಾರರ ಜೊತೆಗೂ ಸಮಲೋಚನೆ ನಡೆಸಿದ್ದು, ಶುಕ್ರವಾರ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮೈಸೂರು ಲೋಕಾಯುಕ್ತ ಪೊಲೀಸರು 3 ತಿಂಗಳೊಳಗೆ ಅಂದರೆ ಡಿಸೆಂಬರ್ 24ರೊಳಗೆ ವರದಿ ಸಲ್ಲಿಕೆಯಾಗಬೇಕು ಎಂದು ಕೋರ್ಟ್ ಆದೇಶ ನೀಡಿದೆ

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!