Ad imageAd image

ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ 

Bharath Vaibhav
ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ 
WhatsApp Group Join Now
Telegram Group Join Now

ಬೆಂಗಳೂರು : ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.

ತಿಲಕ್ ನಗರ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶದ ಸ್ವರೂಪದಲ್ಲೇ ಕೋರ್ಟ್ ಸೀತಾರಾಮನ್ ಅವರ ವಿಚಾರದಲ್ಲೂ ಆದೇಶ ಕೊಟ್ಟಿದೆ.

ಚುನಾವಣಾ ಬಾಂಡ್​​​ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. FIR ದಾಖಲಿಸಬೇಕು ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ತ್​ ನ ಆದರ್ಶ್ ಅಯ್ಯರ್ ಎಂಬುವವರು ಕೋರ್ಟ್ ನಲ್ಲಿ ದೂರು (PCR) ದಾಖಲಿಸಿದ್ದರು.

ಈ ಅರ್ಜಿಯ ವಿಚಾರಣೆ ಇಂದು ನಡೆಸಿರುವ ಕೋರ್ಟ್ FIR ದಾಖಲಿಸಿ ಎಂದು ಬೆಂಗಳೂರಿನ ತಿಲಕ್ ನಗರದ ಪೊಲೀಸರಿಗೆ ಆದೇಶ ಮಾಡಿದೆ. ಅಲ್ಲದೇ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಕೋರ್ಟ್​ ಮುಂದೂಡಿದೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!