Ad imageAd image

ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ : ಆರೋಪಿಗೆ ಗಲ್ಲು ಶಿಕ್ಷೆ 

Bharath Vaibhav
ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ : ಆರೋಪಿಗೆ ಗಲ್ಲು ಶಿಕ್ಷೆ 
WhatsApp Group Join Now
Telegram Group Join Now

ಬೆಳಗಾವಿ: ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ 2017 ರಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕ್ಲೇಟ್‌ ಆಸೆ ತೋರಿಸಿ, ಪುಸಲಾಯಿಸಿ ಕಬ್ಬಿನ ಗದ್ದೆಗೆ ಕರೆದೊಯ್ದಿದ್ದ.ಅಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿದ್ದ

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಹಾಗೂ 45 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಅಲ್ಲದೇ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿಯ ಪೋಷಕರಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ನೀಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!