ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಇಂದಿನಿಂದ ಲೋಕಾಯುಕ್ತದಿಂದ ತನಿಖೆ ಆರಂಭವಾಗಲಿದೆ.
‘ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ
ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್‌ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.
ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.