Ad imageAd image

17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

Bharath Vaibhav
17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
WhatsApp Group Join Now
Telegram Group Join Now

ಬೆಳಗಾವಿ : ಕೌಟುಂಬಿಕ ಕಲಹದಿಂದ ಮನನೊಂದು ತಾಯಿಯೊಬ್ಬಳು ತನ್ನ 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ಘಟನೆ ನಡೆದಿದ್ದು, ತನ್ನ 17 ತಿಂಗಳ ಹಸೂಗೂಸಾದ ಕುಶಾಲ್ ನೊಂದಿಗೆ ಗಾಯತ್ರಿ ವಾಗಮೊರೆ (26) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿದುಬಂದಿದೆ.ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕದಲ್ಲಿ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ, ತಾಯಿ ಮತ್ತು ಮಗುವಿನ ಶಿವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!