ಬೆಂಗಳೂರು : ಬೆಂಗಳೂರಿನಲ್ಲಿ ಪ್ರಯಾಣಿಕನೊಬ್ಬ ಬಿಎಂಟಿಸಿ ಬಸ್ ಕಂಡಕ್ಟರ್ ಗೆ ಚಾಕುವಿನಿಂದ ಇರಿದಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಬಾಗಿಲ ಬಳಿ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಕಂಡಕ್ಟರ್ ಗೆ ಚಾಕುವಿನಿಂದ ಇರಿದಿದ್ದಾನೆ.
ಜಾರ್ಖಂಡ್ ಮೂಲದ ಹರ್ಷ ಸಿನ್ಹಾ ಎಂಬುವನು ಕೃತ್ಯವೆಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಗಾಯಗೊಂಡ ಕಂಡಕ್ಟರ್ ಯೋಗೀಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಮತ್ತೊಂದು ಕಂಪನಿಯಲ್ಲಿ ಸಂದರ್ಶನಕ್ಕೆ ಹೋಗಿದ್ದ ಆತನಿಗೆ ಕೆಲಸ ಸಿಕ್ಕಿರಲಿಲ್ಲ.
ಬಸ್ ನಲ್ಲಿ ವಾಪಸ್ ಬರುವಾಗ ಡೋರ್ ಬಳಿ ನಿಲ್ಲಬೇಡ ಎಂದಿದ್ದಕ್ಕೆ ಕಂಡಕ್ಟರ್ ಚಾಕುವಿನಿಂದ ಇರಿದಿದ್ದ ಆರೋಪಿ ಬಸ್ ನಲ್ಲಿದ್ದ ಸುತ್ತಿಗೆಯಿಂದ ಗಾಜು ಒಡೆದು ಹಾಕಿದ್ದ. ಬಸ್ ನಲ್ಲಿ ಪ್ರಯಾಣಿಕರು ಇರುವಾಗಲೇ ಇಂತಹ ಕೃತ್ಯವೆಸಗಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.