ಬೆಳಗಾವಿ : ಬೌಗೋಳಿಕವಾಗಿ ಬೆಳಗಾವಿ ಜಿಲ್ಲೆ ಅತಿದೊಡ್ಡ ಜಿಲ್ಲೆ, ಅಭಿವೃದ್ಧಿ ಹಿತ ದೃಷ್ಟಿಯಿಂದ ಜಿಲ್ಲೆಯ ವಿಭಜನೆ ಅನಿವಾರ್ಯ ಎಂದು ವಿಧಾನಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಅಥಣಿ ತಾಲೂಕಿನ ಗಡಿ ಗ್ರಾಮ ಬೆಳಗಾವಿ ಕೇಂದ್ರ ಸ್ಥಾನದಿಂದ 200 ಕಿಲೋ ಮೀಟರ್ ದೂರವಿದ್ದರೆ, ರಾಮದುರ್ಗ ತಾಲೂಕಿನ ಗಡಿ ಗ್ರಾಮ ಬೆಳಗಾವಿ ಕೇಂದ್ರದಿಂದ 150 ಕಿಲೋಮೀಟರ್ ದೂರವಿದೆ. ಗಡಿ ಗ್ರಾಮಗಳ ಜನರಿಗೆ ಜಿಲ್ಲಾ ಕೇಂದ್ರ ಸಂಪರ್ಕ ಕಷ್ಟಕರವಾಗಿದೆ ಎಂದು.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಬೆಳಗಾವಿ ಜಿಲ್ಲೆಯ ವಿಭಜನೆ ಬಗ್ಗೆ ಚರ್ಚೆ ನಡೆಸಬೇಕು. ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಎರಡು ಅಥವಾ ಮೂರು ಜಿಲ್ಲೆ ಮಾಡಬೇಕೋ ಎಂದು ನಿರ್ಧರಿಸಬೇಕು. ಜಿಲ್ಲೆಯ 18 ಶಾಸಕರ ಜೊತೆಗೆ ಜಿಲ್ಲೆಯಲ್ಲಿ ಹೆಸರು ಮಾಡಿರುವಂಥ ಹೋರಾಟಗಾರರನ್ನು ಸಭೆಗೆ ಆಹ್ವಾನಿಸಿ, ಚರ್ಚೆ ನಡೆಸಬೇಕು. ಸಭೆಯಲ್ಲಿ ಒಂದು ನಿರ್ಧಾರ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.
ವರದಿ ಪ್ರತೀಕ ಚಿಟಗಿ