ವಿಜಯಪುರ : ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆ ವಿಜಯಪುರದಲ್ಲಿ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿ ಕೋಮುಗಲಭೆ ಮಾಸುವ ಮುನ್ನವೇ ಇದೀಗ ವಿಜಯಪುರದಲ್ಲಿ ಗಣಪತಿ ಮೂರ್ತಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.
ವಿಜಯಪುರದ ಗಣಪತಿ ಚೌಕ್ ನಲ್ಲಿ ಗಣಪತಿ ಮೆರವಣಿಗೆನಡೆಸಲಾಗುತ್ತಿತ್ತು. ಈ ವೇಳೆ ಕೆಲ ಕಿಡಿಗೇಡಿಗಳು ಏಕಾಏಕಿ ಗಣಪತಿ ಮೆರವಣಿಗೆ ಸಾಗುತ್ತಿದ್ದ ದಾರಿಯಲ್ಲೇ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಘಟನೆ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಹಿಂದೂಪರ ಸಂಘಟನೆಗಳು, ಕಿಗೇಡಿಗಳ ಕೃತ್ಯವನ್ನು ಖಂಡಿಸಿದ್ದಾರೆ