ಬೆಂಗಳೂರು : ಹಿಂದೂ ಹೆಸರುಗಳನ್ನು ಇಟ್ಟುಕೊಂಡು ದಾವಣಗೆರೆಯಲ್ಲಿ ವಾಸವಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಬುಧವಾರವಷ್ಟೇ ಪೊಲೀಸರು ಬಂಧಿಸಿದ್ದರು.
ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿ, ಮೂವರನ್ನು ಜಿಗಣಿಯಲ್ಲಿ ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಸೋಮವಾರ ಜಿಗಣಿ ಸಮೀಪ ನಾಲ್ವರು ಪಾಕ್ ಪ್ರಜೆಗಳನ್ನು ಬಂಧಿಸಲಾಗಿತ್ತು. ನಂತರ ಹೆಚ್ಚಿನ ತನಿಖೆಗಾಗಿ ಪೊಲೀಸರ ನಾಲ್ಕು ತಂಡಗಳ ರಚನೆ ಮಾಡಿ, ತೀವ್ರ ತನಿಖೆ ಮುಂದುವರಿಸದಾಗ ಒಂದೊಂದೇ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿವೆ.
ಇನ್ನು ಪಾಕಿಸ್ತಾನದಿಂದ 15ಕ್ಕೂ ಹೆಚ್ಚು ಜನ ಅಕ್ರಮವಾಗಿ ಭಾರತಕ್ಕೆ ನುಸುಳಿರುವ ಶಂಕೆ ವ್ಯಕ್ತವಾಗಿದ್ದು, ಇವರು ಮೆಹದಿ ಫೌಂಡೇಷನ್ಗೆ ಸೇರಿದ್ದು, ಯೂನಸ್ ಅಲ್ಗೋರ್ ಧರ್ಮ ಗುರು ಪರ ಪ್ರಚಾರಕ್ಕಾಗಿ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.