ರಾಯಚೂರು: ದೇವಾಲಯದ ಮಹಿಳಾ ಅರ್ಚಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ರಾಯಚೂರು ಜಿಲ್ಲೆಯ ಡೊಂಗರಾಂಪೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ಮಾಡುತ್ತಿದ್ದ ಮಂಜುಳಾ (42) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಂಟಿಯಾಗಿ ವಾಸಿಸುತ್ತಿದ್ದ ಮಂಜುಳಾ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಘಟನೆ ಸಂಬಂಧ ಯಾಪಲದಿನ್ನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತನಿಖೆಯಿಂದಲೇ ತಿಳಿದು ಬರಲಿದೆ.