Ad imageAd image

ಕಿತ್ತೂರು ಉತ್ಸವ: ಅಧಿಕಾರಿಗಳ ಪೂರ್ವಭಾವಿ ಸಭೆ

Bharath Vaibhav
ಕಿತ್ತೂರು ಉತ್ಸವ: ಅಧಿಕಾರಿಗಳ ಪೂರ್ವಭಾವಿ ಸಭೆ
WhatsApp Group Join Now
Telegram Group Join Now

ಬೆಳಗಾವಿ:-  ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ.

ಅ.4(ಕರ್ನಾಟಕ ವಾರ್ತೆ): ಈ ಬಾರಿಯ ಕಿತ್ತೂರು ಉತ್ಸವವನ್ನು ಅದ್ಧೂರಿಯಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಿತ್ತೂರು ಉತ್ಸವದ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ(ಅ.4) ನಡೆದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೆರವಣಿಗೆ, ಶಿಷ್ಟಾಚಾರ, ಊಟದ ವ್ಯವಸ್ಥೆ, ವೇದಿಕೆ ಕಾರ್ಯಕ್ರಮಗಳು, ವಸ್ತುಪ್ರದರ್ಶನ ಮಳಿಗೆ, ಕ್ರೀಡೆಗಳು, ಅನ್ನೋತ್ಸವ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಉತ್ಸವದ ಹಿನ್ನೆಲೆಯಲ್ಲಿ ರಚಿಸಲಾಗಿರುವ ಪ್ರತಿಯೊಂದು ಉಪ ಸಮಿತಿಗಳು ಸಭೆಗಳನ್ನು ನಡೆಸಿ, ಸಲಹೆಗಳನ್ನು ಪಡೆದುಕೊಂಡು ಸೂಕ್ತ ರೀತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದರು.

ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರು, ಇದುವರೆಗಿನ ಸಿದ್ಧತೆಗಳ ಕುರಿತು ಮಾಹಿತಿಯನ್ನು ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಎಚ್.ಚನ್ನೂರ ಅವರು, ಉತ್ಸವದ ಅಂಗವಾಗಿ ಕೋಟೆ ಆವರಣದಲ್ಲಿ ಮೂರು ದಿನಗಳ ಕಾಲ ಕಿತ್ತೂರು ಚನ್ನಮ್ಮ ಆಡಳಿತ; ಸಂಗೊಳ್ಳಿ ರಾಯಣ್ಣನ ಹೋರಾರಟ ಮತ್ತಿತರ ವಿಷಯಗಳ ಕುರಿತು ಪೇಂಟಿಂಗ್ ಸ್ಪರ್ಧೆ ಏರ್ಪಡಿಸುವುದರ ಜತೆಗೆ ಉತ್ಸವದ ವೇಳೆ ಪ್ರದರ್ಶನ ನಡೆಸಲಾಗುವುದು ಎಂದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ‌ ನಿರ್ದೇಶಕ ಸತ್ಯನಾರಾಯಣ ಭಟ್, ಅವರು ವಸ್ತುಪ್ರದರ್ಶನ ಮಳಿಗೆ ಸ್ಥಾಪನೆಯ ಕುರಿತು ವಿವರಿಸಿದರು.
ಮೆರವಣಿಗೆ ಹಾಗೂ ರೂಪಕಗಳ ಸಿದ್ಧತೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜ್ ಸಭೆಯಲ್ಲಿ ವಿವರಿಸಿದರು.

ಕಲಾವಿದರು ಮತ್ತು ಕಲಾತಂಡಗಳ ಆಹ್ವಾನ ಮತ್ತು ಅವರಿಗೆ ಊಟೋಪಹಾರ ಮತ್ತು ವಸತಿ ಕಲ್ಪಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯಾ ಬಾಪಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ವಿವರಿಸಿದರು.
ಊಟೋಪಹಾರ ವ್ಯವಸ್ಥೆಯ ಸಿದ್ಧತೆಗಳ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಸೇರಿದಂತೆ ವಿವಿಧ ಸಮಿತಿಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!