Ad imageAd image

ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? : ಸಿದ್ದರಾಮಯ್ಯ 

Bharath Vaibhav
ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ರಾಯಚೂರು: ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖವನ್ನೂ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಸ್ವಾಭಿಮಾನ ಸಮಾವೇಶದಲ್ಲಿ ಜನತೆಯನ್ನು ಪ್ರಶ್ನಿಸಿದ್ದಾರೆ.

ರಾಯಚೂರಿನ ಮಾನ್ವಿಯಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು? ಎಂದು ಭಾವನಾತ್ಮಕವಾಗಿ ಜನ ಸಾಗರವನ್ನು ಪ್ರಶ್ನಿಸಿದರು.

ಬಿಜೆಪಿ-ಜೆಡಿಎಸ್ ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಜನರಿಗೆ ಸಹಾಯ ಮಾಡುವ ಅವಕಾಶ ಇತ್ತು. ರಾಜ್ಯದ ಅಭಿವೃದ್ಧಿ ಮಾಡುವ ಅವಕಾಶವೂ ಇತ್ತು. ಅಧಿಕಾರ, ಅವಕಾಶ ಇದ್ದಾಗ ಜನಪರ ಕೆಲಸ ಮಾಡದ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಈಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿದ್ದಾರೆ.

ರಾಜ್ಯದ ಬೊಕ್ಕಸ ಖಾಲಿ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದಾಗಲೂ ಜನರ ಕೆಲಸ ಮಾಡಲಿಲ್ಲ. ಬಿಜೆಪಿ ಸ್ವಂತ ಶಕ್ತಿ ಮೇಲೆ ಇವತ್ತಿನವರೆಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಏನಿದ್ದರೂ ಆಪರೇಷನ್ ಕಮಲದ ಮೂಲಕ ಮಾತ್ರ ಬಿಜೆಪಿ ಅಧಿಕಾರ ಹಿಡಿದಿದೆ. ಹೀಗಾಗಿ ಅವರಿಗೆ ಜನರ ಅಭಿವೃದ್ಧಿ ಬೇಕಾಗಿಲ್ಲ. ಬೈಪಾಸ್ ಹಾದಿಯಲ್ಲೇ ಅಧಿಕಾರ ಹಿಡಿಯಲು ಕಾದು ಕುಳಿತಿದ್ದಾರೆ ಎಂದು ಟೀಕಿಸಿದರು.

ಕಾರಣವೇ ಇಲ್ಲದೆ ರಾಜೀನಾಮೆ ಕೊಡಿ, ರಾಜಿನಾಮೆ ಕೊಡಿ ಎನ್ನುತ್ತಿದ್ದಾರೆ. ನನಗೂ ಬೇಸರ ಆಗಿದೆ. ಆದರೆ, ನಿಮಗಾಗಿ ನಾನು ಹೋರಾಟ ಮುಂದುವರೆಸಿದ್ದೇನೆ. ನಾನು ಅವರ ಬೆದರಿಕೆಗಳಿಗೆ ಜಗ್ಗೋನೂ ಅಲ್ಲ. ಬಗ್ಗೋನೂ ಅಲ್ಲ. ನನ್ನನ್ನು ಕೆಳಗೆ ಇಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಸೋಲಿಸ್ತೀನಿ ಎಂದು ಗುಡುಗಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!