ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.
ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
ಇಂದು ಕೂಡ ದರ್ಶನ್ ಪರ ವಕೀಲ ನಾಗೇಶ್ ಸುದೀರ್ಘ ವಾದ ಮಂಡನೆ ಮಾಡಿದರು. ವಾದ ಆಲಿಸಿದ ನ್ಯಾಯಾಲಯ ಅಕ್ಟೋಬರ್ 8ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.
ಇದೇ ವೇಳೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಕೋರ್ಟ್, ಅಕ್ಟೋಬರ್ 8ಕ್ಕೆ ಮುಂದೂಡಿದೆ.