ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಗೋಕುಲ ರೋಡ್ ಪೊಲೀಸರು ಡಕಾಯಿತನ ಮೇಲೆ ಗುಂಡಿನ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮಹೇಶ್ ಸೀತಾರಾಮ್ ಕಾಳೆ ಬಂಧಿತ ಡಕಾಯಿತ. ಇಂದು ಮುಂಜಾನೆ ಮಹೇಶ್ ಹಾಗೂ ಆತನ ಗ್ಯಾಂಗ್ ಮನೆಗಳ್ಳತನಕ್ಕೆ ಇಳಿದಿತ್ತು.ತಕ್ಷಣ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ ಪೊಲೀಸರು ಮಹೇಶ್ ನನ್ನು ಬಂಧಿಸಿದ್ದಾರೆ.
ಈ ವೇಳೆ ಉಳಿದವರು ಎಸ್ಕೇಪ್ ಆಗಿದ್ದಾರೆ. ಉಳಿದವರು ಇರುವ ಸ್ಥಳ ತೋರಿಸುತ್ತೇನೆ ಎಂದು ಪೊಲೀಸರನ್ನು ಕರೆದುಕೊಂಡು ಹೋದ ಮಹೇಶ್ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.
ಈ ವೇಳೆ ಪಿಎಸ್ ಐ ಸಚಿನ್ ದಾಸರೆಡ್ಡಿ ಮಹೇಶ್ ಮೇಲೆ ಫೈರಿಂಗ್ ಮಾಡಿದ್ದಾರೆ. ಗುಂಡೇಟು ತಗುಲಿದ ಮಹೇಶ್ ನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.