Ad imageAd image

ಇದು ಜಾತಿ ಸಮೀಕ್ಷೆಯಲ್ಲ, ಇಡೀ 7 ಕೋಟಿ ಕನ್ನಡಿಗರ ಸಮೀಕ್ಷೆ : ಸಿದ್ದರಾಮಯ್ಯ 

Bharath Vaibhav
ಇದು ಜಾತಿ ಸಮೀಕ್ಷೆಯಲ್ಲ, ಇಡೀ 7 ಕೋಟಿ ಕನ್ನಡಿಗರ ಸಮೀಕ್ಷೆ : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು : ಜಾತಿಜನಗಣಿತಿ ಸಮೀಕ್ಷೆ ಬರೀ ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲ, ಇದು ಇಡೀ 7 ಕೋಟಿ ಕನ್ನಡಿಗರ ಸಮೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಶಾಸಕರುಗಳೊಂದಿಗೆ ಸಭೆ ನಡೆಸಿದ ನಂತರ ಜಾತಿವಾರು ಜನಗಣತಿ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿ, ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆಯು ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ನಮ್ಮದು ಎಂದು ಬಣ್ಣಿಸಿದರು.

ಅ.18 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ ಎಂದು ಸಿಎಂ ಹೇಳಿದರು.

ಈ ಹಿಂದೆ ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಎಚ್. ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಬಹಳ ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿದ್ದಾರೆ.

ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ. ಈ ಹಿಂದೆ ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ.

ಹೀಗಾಗಿ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿ ಸ್ವೀಕರಿಸಿ ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಸಿಎಂ ಆದ ವೇಳೆ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ ಎಂದು ಸಿಎಂ ಆರೋಪಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!