ಬೀದರ್ : ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೀದರ್ ನಾ ದೇವವನ ಎಂಬಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಮೃತರನ್ನು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶ್ಪುರ ಗ್ರಾಮದ ನಿವಾಸಿಗಳು ಎಂದು ಹೇಳಲಾಗುತ್ತಿದೆ.ಅಪಘಾತದಲ್ಲಿ ದಂಪತಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ಮೃತರನ್ನು ಗಣೇಶ್ ಪುರ ಗ್ರಾಮದ ಜಗನ್ನಾಥ (35) ಪತ್ನಿ ರೇಣುಕಾ (35) ಪುತ್ರ ವಿನೋದ್ ಕುಮಾರ್ (14) ಸ್ಥಳದಲ್ಲಿ ದುರ್ಮರಣ ಹೊಂದಿದ್ದಾರೆ. ಕೂಡಲೇ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್ ನ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು.