Ad imageAd image

ಇಂದು ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ 

Bharath Vaibhav
ಇಂದು ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ 
WhatsApp Group Join Now
Telegram Group Join Now

ನವದೆಹಲಿ : ಜಮ್ಮು- ಕಾಶ್ಮೀರ ಮತ್ತು ಹರಿಯಾಣ ಅಸೆಂಬ್ಲಿ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಶುರುವಾಗಲಿದೆ.

ಜಮ್ಮು ಮಾತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆ ನಡೆದಿದ್ದು, ಬಹಳಷ್ಟು ಮಹತ್ವವನ್ನು ಪಡೆದಿದೆ.

ಹರ್ಯಾಣ ವಿಧಾನಸಭೆಯ 90 ಸ್ಥಾನಗಳಿಗೆ ಒಂದೇ ಹಂತದಲ್ಲಿ ಶನಿವಾರ ಚುನಾವಣೆ ನಡೆದಿದ್ದರೆ, ಜಮ್ಮು-ಕಾಶ್ಮೀರದ 90 ಸ್ಥಾನಕ್ಕೆ 3 ಹಂತದಲ್ಲಿ ಇತ್ತೀಚೆಗೆ ಚುನಾವಣೆ ನಡೆದಿತ್ತು. ಎರಡೂ ರಾಜ್ಯಗಳಲ್ಲಿ ಬಹುಮತಕ್ಕೆ 46 ಸ್ಥಾನಗಳು ಬೇಕಾಗಿದೆ.

ಈಗಾಲೇ ಉಭಯ ರಾಜ್ಯದಲ್ಲಿ ಕಾಂಗ್ರೆಸ್ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ ಎಂದು ಎಕ್ಸಿಟ್ ಪೋಲ್ ತನ್ನ ಸಮಿಕ್ಷೇಯಲ್ಲಿ ತಿಳಿಸಿದ್ದು, ಕಾಂಗ್ರೆಸ್ ಗೆ ಕೊಂಚ ಮಟ್ಟಿಗೆ ಧೈರ್ಯ ಬಂದಂತಿದೆ.

90 ಮತ ಎಣಿಕೆ ಕೇಂದ್ರಗಳಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಮೂರು ಸ್ತರದ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಇದರಂತೆ, ಮೊದಲ ಹಂತದ ಭದ್ರತೆಯಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿ, ಹರಿಯಾಣ ಸಶಸ್ತ್ರ ಪೊಲೀಸ್ ಅಧಿಕಾರಿಗಳನ್ನು ಎರಡನೇ ಹಂತದಲ್ಲಿ ನಿಯೋಜಿಸಲಾಗಿದೆ.

ಇನ್ನು ಮೂರನೇ ಹಂತದಲ್ಲಿ ಜಿಲ್ಲಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಕೇಂದ್ರಗಳಾದ್ಯಂತ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 12,000 ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!