ಹೊಸಪೇಟೆ(ವಿಜಯನಗರ): ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜಂಬೋಬನಹಳ್ಳಿ ಸಮೀಪ ಘಟನೆ ನಡೆದಿದೆ.
ಸಾಗರ್(14), ಗುರು(14), ವಿನಯ್(11) ಮೃತಪಟ್ಟವರು ಎಂದು ಹೇಳಲಾಗಿದೆ. ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದ ಬಳಿ ಈಜಲು ಹೋದಾಗ ದುರಂತ ಸಂಭವಿಸಿದೆ.
ಖಾನಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.