ಬೆಂಗಳೂರು : ಕೊಲೆ ಕೇಸ್ ಆರೋಪಿ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಇದೀಗ ರೈತ ಮುಖಂಡೆಯೋರ್ವರು ಅತ್ಯಾಚಾರ ಆರೋಪದಡಿ ದೂರು ದಾಖಲಿಸಿದ್ದಾರೆ.
ದೇವನಹಳ್ಳಿ ಸಮೀಪದ IVC ರೋಡ್ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ತಮ್ಮ ಕಾರ್ ಹಿಂದಿನ ಸೀಟ್‌ನಲ್ಲಿ ನನ್ನ ಹತ್ತಿರ ಕುಳಿತು ಅಸಭ್ಯ ವರ್ತನೆ ತೋರಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ.ಇದಲ್ಲದೇ ಅ.2 ರಂದು ಗಾಂಧಿ ಜಯಂತಿಯಂದೂ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ IPS ಸೆಕ್ಷನ್ 506 , 504, ,201, 366, 376, 323, 354 354, , ಹಾಗೂ IT ಕಾಯ್ದೆಯಡಿ ವಿನಯ್ ಕುಲಕರ್ಣಿ ವಿರುದ್ಧ ಪ್ರಕರಣ ದಾಖಲಾಗಿದೆ.