ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಹಾಗೂ ಪವಿತ್ರಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ವಕೀಲ ಸಿ.ವಿ ನಾಗೇಶ್ ತಮ್ಮ ವಾದ ಪ್ರತಿವಾದವನ್ನು ಮಂಡಿಸಿದ್ದರು. ಈ ಬಳಿಕ ಕೋರ್ಟ್ ಇಂದಿಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು.
ಇದಲ್ಲದೇ ಎ.1 ಆರೋಪಿ ಪವಿತ್ರಾ ಗೌಡ, ರವಿ, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಜಾಮೀನು ಅರ್ಜಿಯನ್ನು ಕೂಡ ಇಂದು ನ್ಯಾಯಾಲಯ ನಡೆಸಲಿದೆ. ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ದೊರೆಯದೇ ಇದ್ದರೇ, ಹೈಕೋರ್ಟ್ ಮೊರೆ ಹೋಗುವಂತ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ನಟ ದರ್ಶನ್ ಜಾಮೀನು ಕುರಿತು ಯಾವ ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.