ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಯಡಿಯೂರಪ್ಪ ನಗರದಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ನೆಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.