ವಿಜಯಪುರ : ಕರ್ನಾಟಕ ರಾಜ್ಯ ರಾಜಕಾರಣದ ಇತಿಹಾಸವನ್ನು ತಿರುಗಿ ನೋಡಿದಾಗ ಹಲವು ರಾಜಕಾರಣಿಗಳು ಈ ಒಂದು ಸಿಡಿ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು.
ಅವರು ಯಾರೆಂದು ಎಲ್ಲರಿಗೂ ಗೊತ್ತಿರುವ ವಿಷಯವೇ. ಹಾಗಾಗಿ ಅವರ ಹೆಸರು ಹೇಳುವ ಅವಶ್ಯಕತೆ ಇಲ್ಲ. ಆದರೆ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಮುಸ್ಲಿಂ ಮುಖಂಡರು ನಿಮ್ಮ ಸಿಡಿ ಕೂಡ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿದ್ದಾರೆ.
ನಾಳೆ ವಿಜಯಪುರದಲ್ಲಿ ‘ವಕ್ಫ್ ಹಠಾವೋ ದೇಶ ಬಚಾವೋ’ ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಮುಸ್ಲಿಂ ಮುಖಂಡರು, ನಿಮ್ಮ ರಾಜಕಾರಣ ಏನು ಇದೆಯೋ ಅದನ್ನು ಮಾಡಿಕೊಂಡು ಹೋಗಿ. ಇಲ್ಲದಿದ್ದರೆ ನವೆಂಬರ್ 6ರಂದು ನಿಮ್ಮ ಸಿಡಿ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ವಿಚಾರವಾಗಿ ಇಂದು ಮುಸ್ಲಿಂ ಮುಖಂಡರಾದ ಎಸ್ ಎಸ್ ಖಾದ್ರಿ ಅವರು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ತಿ…ಮುಚ್ಚಿಕೊಂಡು ರಾಜಕಾರಣ ಮಾಡಬೇಕು. ಇಲ್ಲದಿದ್ದರೆ ನವೆಂಬರ್ 06ರಂದು ಸಿಡಿ ಬಿಡುಗಡೆ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದರು. ಹಾಗಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಿಡಿ ಕೂಡ ಇದೆಯಾ ಎಂಬ ಅನುಮಾನ ಮೂಡುತ್ತಿದೆ.