Ad imageAd image

ಅಕ್ಟೋಬರ್ 26 ರಂದು ದಬ್ಬೇಘಟ್ಟ ಹೋಬಳಿ ಸಾಹಿತ್ಯ ಸಮ್ಮೇಳನ / ಸಮ್ಮೇಳನಾಧ್ಯಕ್ಷರಾಗಿ ಎಲ್.ಮಂಜಯ್ಯಗೌಡ ಆಯ್ಕೆ

Bharath Vaibhav
ಅಕ್ಟೋಬರ್ 26 ರಂದು ದಬ್ಬೇಘಟ್ಟ ಹೋಬಳಿ ಸಾಹಿತ್ಯ ಸಮ್ಮೇಳನ / ಸಮ್ಮೇಳನಾಧ್ಯಕ್ಷರಾಗಿ ಎಲ್.ಮಂಜಯ್ಯಗೌಡ ಆಯ್ಕೆ
WhatsApp Group Join Now
Telegram Group Join Now

ತುರುವೇಕೆರೆ: -ಅಕ್ಟೋಬರ್ 26ರಂದು ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರನ್ನಾಗಿ ನಿವೃತ್ತ ಶಿಕ್ಷಕ ಎಲ್.ಮಂಜಯ್ಯಗೌಡರವರನ್ನು ಆಯ್ಕೆ ಮಾಡಲಾಗಿದೆ ಎಂದು ದಬ್ಬೇಘಟ್ಟ ಹೋಬಳಿ ಘಟಕದ ಅಧ್ಯಕ್ಷ ಕೆ.ಟಿ.ಸಂಪತ್ತು ತಿಳಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ತುರುವೇಕೆರೆ ತಾಲ್ಲೂಕಿನ ನಾಲ್ಕೂ ಹೋಬಳಿಗಳಲ್ಲಿ ಸಾರ್ವಜನಿಕರು, ಕನ್ನಡಾಭಿಮಾನಿಗಳ ಸಹಕಾರದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಹೋಬಳಿ ಮಟ್ಟದ ಸಮ್ಮೇಳನಗಳನ್ನು ನಂತರ ದೊಡ್ಡ ಮಟ್ಟದಲ್ಲಿ ತಾಲ್ಲೂಕು ಮಟ್ಟದ ಸಮ್ಮೇಳನವನ್ನು ನಡೆಸಲು ಕಸಾಪ ಅಧ್ಯಕ್ಷ ಡಿ.ಪಿ.ರಾಜು ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮೊದಲನೆಯದಾಗಿ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯಲ್ಲಿ ಒಂದು ದಿನದ ಹೋಬಳಿ ಮಟ್ಟದ ಸಮ್ಮೇಳನ ನಡೆಸಲು ದಿನಾಂಕ ನಿಗದಿಪಡಿಸಿದ್ದು, ಇದೇ ಅಕ್ಟೋಬರ್ ತಿಂಗಳ 26ರಂದು ದಬ್ಬೇಘಟ್ಟದಲ್ಲಿ ಹೋಬಳಿ ಮಟ್ಟದ ಸಮ್ಮೇಳನ ನಡೆಸಲಾಗುವುದು ಎಂದರು.

ದಬ್ಬೇಘಟ್ಟ ಹೋಬಳಿ ಮಟ್ಟದ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಕಸಾಪ ಅಧ್ಯಕ್ಷರ ನಿರ್ದೇಶನದ ಮೇರೆಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ದಬ್ಬೇಘಟ್ಟ ಹೋಬಳಿ ಅಧ್ಯಕ್ಷರು, ಪದಾಧಿಕಾರಿಗಳ ಅಭಿಪ್ರಾಯ ಪಡೆದು ದಬ್ಬೇಘಟ್ಟ ಹೋಬಳಿಯ ಲಕ್ಷ್ಮಿದೇವರಹಳ್ಳಿ ಗ್ರಾಮದ ನಿವೃತ್ತ ಪ್ರಾಧಾಪ್ಯಕ ಎಲ್.ಮಂಜಯ್ಯಗೌಡರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದ ಅವರು, ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಲ್.ಮಂಜಯ್ಯಗೌಡರು ತಾಲ್ಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನ್ನಡ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದಾರೆ. ತಾಲ್ಲೂಕು ಕನ್ನಡ ಭಾಷಾ ಭೋಧಕರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿ ಅನುಭವ ಹೊಂದಿದ್ದು, ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಸಂಘಟನಾ ಕಲೆಯಲ್ಲಿ ಹೆಚ್ಚು ಆಸಕ್ತಿಯುಳ್ಳವರಾಗಿದ್ದಾರೆ ಎಂದರು.

ದಬ್ಬೇಘಟ್ಟ ಗ್ರಾಮದ ಭೈರವ ಕಾನ್ವೆಂಟ್ ಆವರಣದಲ್ಲಿ ಅಕ್ಟೋಬರ್ 26 ರ ಶನಿವಾರ ಬೆಳಗ್ಗೆ 8 ಕ್ಕೆ ಸಮ್ಮೇಳನ ಪ್ರಾರಂಭವಾಗಿ ಅದೇ ದಿನ ಸಂಜೆಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ. ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದು, ಶಾಸಕ ಎಂ.ಟಿ.ಕೃಷ್ಣಪ್ಪನವರು ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಗಾಂಧೀ ಸೇವಾ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಜಿ.ಬಿ.ಶಿವರಾಜ್ ಸಮಾರೋಪ ಸಮಾರಂಭದಲ್ಲಿ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಲಿಂಗಪ್ಪ, ಆದಿಚುಂಚನಗಿರಿ ಮಠದ ಪೀಠಾಕ್ಷರಾದ ನಿರ್ಮಲಾನಂಧನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಲಿದ್ದು, ಮಾಜಿ ಶಾಸಕರಾದ ಮಸಾಲ ಜಯರಾಮ್, ಎಚ್.ಬಿ.ನಂಜೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು, ತಾಲ್ಲೂಕು ಕಸಾಪ ಅಧ್ಯಕ್ಷ ಡಿ.ಪಿ.ರಾಜು ಸೇರಿದಂತೆ ಅನೇಕ ಗಣ್ಯರು, ಜನಪ್ರತಿನಿಧಿಗಳು, ಸಾಹಿತ್ಯಾಸಕ್ತರು ವಿವಿಧ ಸಂಘಟನೆಗಳು ಮತ್ತು ಗ್ರಾಮಸ್ಥರು ಆಗಮಿಸಲಿದ್ದಾರೆ ಎಂದರು.

ಈ ಸಂಧರ್ಭದಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣಿ ಶ್ರೀಕಂಠೇಗೌಡರು, ತಾಲ್ಲೂಕು ಕಸಾಪ ಅಧ್ಯಕ್ಷ ಡಿ.ಪಿ.ರಾಜು, ಮುಖಂಡರಾದ ಉಗ್ರೇಗೌಡರು, ಗೌರವಾಧ್ಯಕ್ಷ ಹೇಮಚಂದ್ರು, ಹುಲಿಕಲ್ ಕೃಷ್ಣಾಚಾರ್, ಮಂಜುನಾಥ್, ಕೆ.ಬಿ.ರಾಮಸ್ವಾಮಿ ಇನ್ನಿತರರು ಇದ್ದರು.

ವರದಿ: ಗಿರೀಶ್ ಕೆ ಭಟ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!