ಧಾರವಾಡ: – ಅಕ್ಟೋಬರ್ 14 ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 23 ರಂದು ಮಧ್ಯಾಹ್ನ 12 ಗಂಟೆಗೆ ಕಿತ್ತೂರ ರಾಣಿ ಚನ್ನಮ್ಮ ಜಯಂತಿಯನ್ನು ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜರುಗಿದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಆಚರಿಸೋಣ ಎಂದು ತಿಳಿಸಿದರು.
ಅಕ್ಟೋಬರ್ 16 ರಂದು ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಗೆ ಆಗಮಿಸಲಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ರಥಕ್ಕೆ ಪೂಜೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಹಾನಗರ ಪಾಲಿಕೆ ಸದಸ್ಯ ಶಂಭು ಸಾಲಿಮನಿ, ಸಮಾಜದ ಮುಖಂಡರಾದ ನಿಂಗಣ್ಣ ಕರಿಕಟ್ಟಿ, ನಿಂಗನಗೌಡ ಪಾಟೀಲ, ಮಡಿವಾಳಪ್ಪ ಸರಿಯಣ್ಣನವರ, ಎಸ್.ಜಿ. ಪಾಟೀಲ ಸೇರಿದಂತೆ ಮುಖಂಡರು, ಹಿರಿಯರು, ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ: -ವಿನಾಯಕ ಗುಡ್ಡದಕೇರಿ