ನವದೆಹಲಿ: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಪ್ರಕಟಿಸಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಚುನಾವಣೆ ನಡೆಯಲಿದೆ.
ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಘೋಷಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.