ಚಿತ್ರದುರ್ಗ : ನಟ ದರ್ಶನ್ & ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನವಾಗಿದೆ. ಚಿತ್ರದುರ್ಗದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದಾಗ ಸಹನಾ ಗರ್ಭಿಣಿಯಾಗಿದ್ದರು.ಸಹನಾ ಅವರು ಇಂದು ಬೆಳಗ್ಗೆ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು.
ಡಿ ಗ್ಯಾಂಗ್ ಜೂನ್ 8 ರಂದು ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ನಂತರ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ. ಸದ್ಯ ಈ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಾ ಸೇರಿ ಆರು ಮಂದಿ ಆರೋಪಿಗಳು ಜೈಲಿನಲ್ಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಗೆ ಕಠಿಣ ಶಿಕ್ಷೆ ಆಗಬೇಕೆಂದು ರೇಣುಕಾಸ್ವಾಮಿ ಪೋಷಕರು ಆಗ್ರಹಿಸುತ್ತಿದ್ದಾರೆ.