ಬೆಂಗಳೂರು : ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಅಕ್ರಮ ಆರೋಪದ ಬಳಿಕ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಯೆಸ್, ರಾಜ್ಯ ಸರ್ಕಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ(ಮುಡಾ) ಹೊಸ ಆಡಳಿತಾಧಿಕಾರಿ ನೇಮಕ ಮಾಡಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ತಂದ ಹಿನ್ನೆಲೆಯಲ್ಲಿ ಮುಡಾಗೆ ಮೇಜರ್ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ.
ಹೀಗಾಗಿ ರಾಜೀನಾಮೆ ನೀಡುವಂತೆ ಮರಿಗೌಡ ಅವರಿಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.ಮರಿಗೌಡ ರಾಜೀನಾಮೆ ಬಳಿಕ ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರ ಚಿಂತನೆ ನಡೆಸಿದೆ.
ಮುಡಾ ಹಗರಣ ರಾಜ್ಯ ಮಾತ್ರವಲ್ಲದೇ ರಾಷ್ಟ್ರವ್ಯಾಪ್ತಿಯಲ್ಲಿ ಭಾರಿ ಸುದ್ದಿಯಾಗಿತ್ತು. ಮುಡಾ ಹಗರಣದ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಯುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿತ್ತು.