ಧಾರವಾಡ:-ಕಿತ್ತೂರು ರಾಣಿ ಚನ್ನಮ್ಮ ಜಯಂತಿಯ ಅಂಗವಾಗಿ ಜಿಲ್ಲೆಗೆ ಆಗಮಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಡಿಸಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ, ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಕವಿವ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ, ತಹಶಿಲ್ದಾರ ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಹಾಗೂ ಕನ್ನಡ ಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದು, ಪುಷ್ಪಾರ್ಚಣೆ ಮಾಡಿದರು. ಮತ್ತು ಕಲಾ ತಂಡಗಳು ಭಾಗವಹಿಸಿದ್ದವು.
ವರದಿ:- ವಿನಾಯಕ ಗುಡ್ಡದಕೇರಿ




