ಚಿತ್ರದುರ್ಗ : ಪಾಗಲ್ ಪ್ರೇಮಿ ಹುಚ್ಚಾಟಕ್ಕೆ ಬೇಸತ್ತು ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಳ್ಳಕರೆ ಮೂಲದ ಪ್ರೇಮಾ (18) ಎಂಬ ಯುವತಿ ಡಾನ್ ಬಾಸ್ಕೊ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.ಈ ಯುವತಿಯ ಬೆನ್ನಟ್ಟಿದ ಯುವಕನೊಬ್ಬ ಲವ್ ಮಾಡು ಎಂದು ಕಾಟ ಕೊಟ್ಟಿದ್ದಾನೆ. ಈ ವಿಚಾರಕ್ಕೆ ಮನನೊಂದ ಪ್ರೇಮಾ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪ್ರೇಮಾ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಟ್ಟಡ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ .
ಪ್ರತಿನಿತ್ಯ ವಿದ್ಯಾರ್ಥಿನಿಗೆ ಪ್ರೀತಿ ಮಾಡುವಂತೆ ಪೀಡುಸುತ್ತಿದ್ದನಂತೆ. ಅಲ್ಲದೇ ವಿದ್ಯಾರ್ಥಿನಿಗೆ ವಾಟ್ಸಾಪ್ ನಲ್ಲಿ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದನು ಎಂದು ತಿಳಿದು ಬಂದಿದೆ. ಸದ್ಯ ಕಿರುಕುಳ ನೀಡುತ್ತಿದ್ದ ಯವಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿ ಬಲಿಯಾಗಿರುವುದು ದುರಂತವೇ ಹೌದು.