Ad imageAd image

ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು 

Bharath Vaibhav
ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು 
YATNAL
WhatsApp Group Join Now
Telegram Group Join Now

ವಿಜಯಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ವಿಜಯಪುರ ಪೊಲೀಸ್ ಠಾಣೆ ಯಲ್ಲಿ FIR ದಾಖಲಾಗಿದೆ.

ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ಹೊಸಮನಿ ಎಂಬುವರು ದೂರು ನೀಡಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ವಿಜಯಪುರ ಪೊಲೀಸ್ ಠಾಣೆ ಯಲ್ಲಿ FIR ದಾಖಲಾಗಿದೆ.

ಅಕ್ಟೋಬರ್ 15ರಂದು ವಕ್ಫ್ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಯತ್ನಾಳ್ ಭಾಷಣ ಮಾಡುವಾಗ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಜತೆಗೆ ಮುಸ್ಲಿಂ ಧರ್ಮದ ನಿಂದನೆ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಿಂದೂ-ಮುಸ್ಲಿಂ ಜಾತಿ ಮಧ್ಯೆ ಗಲಭೆ ಸೃಷ್ಟಿಸುವ ಉದ್ದೇಶದಿಂದ ಭಾಷಣ ಮಾಡಿದ್ದು, ಕೋಮು ಗಲಭೆ ಆಗುವ ಲಕ್ಷಣಗಳು ಕಂಡು ಬರುತ್ತಿವೆ. ಭಯದ ವಾತಾವರಣ ಮೂಡಿಸಿದ ಕಾರಣ ಶಾಸಕ‌ ಯತ್ನಾಳ್ ಹಾಗೂ ವೇದಿಕೆ ಮೇಲಿದ್ದ ಇತರರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!