ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಪಾಪ ಒಳ್ಳೆಯವರು.ಆದರೆ, ಮೈತ್ರಾದೇವಿ ಸಾವು ಹೇಗಾಯಿತು? ಈ ಬಗ್ಗೆ ತನಿಖೆಯಾಗಲಿ ಎಂದು ಹೇಳುತ್ತೇನೆ. ಇದನ್ನು ಅವರು ಒಪ್ಪಿಕೊಳ್ಳುತ್ತಾರಾ ಎಂದು ಪ್ರಶ್ನಿಸಿದ್ದಾರೆ.
ಶೋಭಾ ಕರಂದ್ಲಾಜೆಯನ್ನು ಬಂಧಿಸಬೇಕು. ಬಿ.ಎಸ್.ವೈ. ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದಿದ್ದಾರೆ.