Ad imageAd image

ನರೇಗಾ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ

Bharath Vaibhav
ನರೇಗಾ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ
WhatsApp Group Join Now
Telegram Group Join Now

ಸವದತ್ತಿ : ತಾಲೂಕ ಪಂಚಾಯತ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಐಇಸಿ ಚಟುವಟಿಕೆಯಡಿ “ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ” ಅಭಿಯಾನದ ನಿಮಿತ್ಯ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಆನಂದ ಬಡಕುಂದ್ರಿ ರವರು ಹಾಗೂ ತಾಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಶ್ರೀ ಆರ್ ಬಿ ರಕ್ಕಸಗಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಬಳಿಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಆನಂದ ಬಡಕುಂದ್ರಿ ರವರು ಮಾತನಾಡಿ ಮನರೇಗಾ ಯೋಜನೆಯ 2025-26ನೇ ಸಾಲಿನ ಕಾರ್ಮಿಕರ ಆಯವ್ಯಯದ ಸಿದ್ದತೆಗಾಗಿ ಮನರೇಗಾ ಯೋಜನೆಯ ಮಹತ್ವ ಮತ್ತು ಯೋಜನೆಯಡಿ ಕೈಗೊಳ್ಳಬಹುದಾದ ವಿವಿಧ ಕಾಮಗಾರಿಗಳ ಕುರಿತು ವ್ಯಾಪಕ ಪ್ರಚಾರ ಮಾಡುವ ಉದ್ದೇಶದಿಂದ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ ನೀಡಲಾಗಿದ್ದು, ಸವದತ್ತಿ ತಾಲ್ಲೂಕಿನ 44 ಗ್ರಾಪಂಗಳ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಲ್ಲಿ ಉದ್ಯೋಗ ವಾಹಿನಿ ಜಾಗೃತಿ ರಥ ಸಂಚರಿಸಲಿದೆ ಎಂದರು.

ಇದೇ ವೇಳೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಮುದಾಯ & ವೈಯಕ್ತಿಕ ಕಾಮಗಾರಿಗಳ ಮಾಹಿತಿಯುಳ್ಳ ಕರಪತ್ರಗಳನ್ನು ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಆನಂದ ಬಡಕುಂದ್ರಿ ರವರು ಬಿಡುಗಡೆಗೊಳಿಸಿದರು.

ಬಳಿಕ ಸಹಾಯಕ ನಿರ್ದೇಶಕರಾದ (ಗ್ರಾಉ) ಆರ್ ಬಿ ರಕ್ಕಸಗಿ ಅವರು ಮಾತನಾಡಿ ಮನರೇಗಾ ಯೋಜನೆಯ ಬಗ್ಗೆ ಗ್ರಾಮೀಣ ಜನರಿಗೆ ಮಾಹಿತಿಯನ್ನು ನೀಡಲು ಉದ್ಯೋಗ ವಾಹಿನಿ ಜಾಗೃತಿ ರಥದ ಮೂಲಕ ಪ್ರಚಾರ ಮಾಡಲಾಗುತ್ತಿದ್ದೆ, ಇ-ಡಿಮ್ಯಾಂಡ ಮೂಲಕ ಕೂಡಾ ಕ್ಯೂ-ಆರ್ ಕೋಡ್ ಬಳಸಿಕೊಂಡು ಕಾಮಗಾರಿಗಳ ಬೇಡಿಕೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಪ್ರಯೋಜನೆಯನ್ನು ಗ್ರಾಮೀಣ ಜನರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು (ಅಕ್ಷರ ದಾಸೋಹ) ಎಮ್ ಸಿ ವಸ್ತ್ರದ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಗ್ರಾಕುನೀ&ನೈ) ಬಿ ವಿ ಅಯ್ಯನಗೌಡರ, ಸಹಾಯಕ ನಿರ್ದೇಶಕರು (ಪಶುಸಂಗೋಪನೆ ಇಲಾಖೆ) ಅನಿಲ ಮರಲಿಂಗನವರ, ತಾಲೂಕಾ ಮಟ್ಟದ ಅಧಿಕಾರಿಗಳು, ವಿಷಯ ನಿರ್ವಾಹಕ ಮಲ್ಲಿಕಾರ್ಜುನ ಕಂಬಿ, ತಾಪಂ ಐಇಸಿ ಸಂಯೋಜಕ ಮಲೀಕಜಾನ ಮೋಮಿನ, ತಾಪಂ ಎಂಐಎಸ್ ಸಂಯೋಜಕ ನಾಗರಾಜ ಬೆಹರೆ, ತಾಪಂ ತಾಂತ್ರಿಕ ಸಂಯೋಜಕ ಮಹಾದೇವ ಕಾಮನ್ನವರ, ಆಡಳಿತ ಸಹಾಯಕಿ ಸಂಜನಾ ಮನವಾಡೆ, ಬಿಎಫ್ ಟಿ ಸುಧೀರಗೌಡ ಪಾಟೀಲ, ಮತ್ತು ತಾಪಂ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!