ಹುಬ್ಬಳ್ಳಿ : ನಾನು ಪಕ್ಷೇತರರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಮಾಜಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಘೋಷಣೆ ಮಾಡಿದ್ದಾರೆ.
ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್ ನಾನು ರಾಜೀನಾಮೆ ನೀಡಿದ್ದೇನೆ, ಪಕ್ಷೇತರ ಅಭ್ಯರ್ಥಿಯಾಗಿ ನಿರ್ಧರಿಸಲು ಸಿದ್ದನಿದ್ದೇನೆ ಎಂದು ಹೇಳಿದರು.ಚುನಾವಣೆಗೆ ಸ್ಪರ್ಧಿಸಬೇಕಾದರೆ ರಾಜೀನಾಮೆ ನೀಡಬೇಕು, ಹಾಗಾಗಿ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ನವೆಂಬರ್ 13 ರಂದು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಲಿದ್ದಾರೆ.