Ad imageAd image

ರಾಣಿ ಚೆನ್ನಮ್ಮನವರ 200 ನೇ ವರ್ಷದ ವಿಜಯೋತ್ಸವ ಕಾರ್ಯಕ್ರಮ ಆಚರಣೆ

Bharath Vaibhav
ರಾಣಿ ಚೆನ್ನಮ್ಮನವರ 200 ನೇ ವರ್ಷದ ವಿಜಯೋತ್ಸವ ಕಾರ್ಯಕ್ರಮ ಆಚರಣೆ
WhatsApp Group Join Now
Telegram Group Join Now

ಬೆಳಗಾವಿ : ವೀರರಾಣಿ ಕಿತ್ತೂರು ಚೆನ್ನಮ್ಮನವರ 200ನೇ ವರ್ಷದ ವಿಜಯೋತ್ಸವದ ಅಂಗವಾಗಿ, ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ರಾಣಿ ಚನ್ನಮ್ಮ ನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಸಂಸದರಾದ ಜಗದೀಶ್ ಶೆಟ್ಟರ್ ಅವರು ‘ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರು ತೋರಿದಂತಹ ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾದದ್ದು. ಅವರು ರಾಜ ಮನೆತನದವರಾಗಿದ್ದರಿಂದ ಬಾಲ್ಯದಿಂದಲೇ ಕುದುರೆ ಸವಾರಿ, ಕತ್ತಿ ಬಳಸುವ ಪರಿಕರಗಳ ಬಗ್ಗೆ ತರಬೇತಿ ಪಡೆದಿದ್ದರು. ಚೆನ್ನಮ್ಮ ಅವರು ತಮ್ಮ ರಾಜ್ಯದ ರಕ್ಷಣೆಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಮಹಿಳೆ ಎಂದು ಹೇಳಿದರು..

ಭಾ.ಜ.ಪಾ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಅವರು ಮಾತನಾಡಿ ರಾಣಿ ಚೆನ್ನಮ್ಮ ಅವರ ಜೀವನ ಮತ್ತು ಹೋರಾಟ ನಾಡಿನ ಪ್ರತಿಯೊಬ್ಬ ಮಹಿಳೆಗೂ ಸ್ಫೂರ್ತಿದಾಯಕವಾಗಿದೆ. ಮಹಿಳೆಯರು ಕೂಡ ಸ್ವಾವಲಂಬಿಗಳಾಗಿ ಶೋಷಣೆ ಹಾಗೂ ಅನ್ಯಾಯದ ವಿರುದ್ಧ ಹೋರಾಟ ಮಾಡುವಂತಹ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು. ನಂತರ ಕಾರ್ಯಕರ್ತರು ಪದಾಧಿಕಾರಿಗಳೊಡನೆ ಬೆಳಗಾವಿ ನಗರದ ರಾಣಿ ಚೆನ್ನಮ್ಮ ಸರ್ಕಲ್ ಹತ್ತಿರ ಇರುವ ಚೆನ್ನಮ್ಮನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ, ರಾಣಿ ಚೆನ್ನಮ್ನವರ ಜನ್ಮಸ್ಥಳ ಕಾಕತಿಗೆ ತೆರಳಿ, ಅಲ್ಲಿಂದ ಕಿತ್ತೂರಿನಲ್ಲಿರುವ ರಾಣಿ ಚೆನ್ನಮ್ಮಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಮಹಾಂತೇಶ ದೊಡ್ಡಗೌಡರ, ಅರವಿಂದ ಪಾಟೀಲ್, ಮಹಾಂತೇಶ ಕವಟಗಿಮಠ, ಲಕ್ಷ್ಮೀ ಇನಾಮದಾರ, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಎಂ.ಬಿ.ಜಿರಲಿ ಹಾಗೂ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!