ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವುದಾಗಿ ಆದೇಶ ಕಾಪಿಯೊಂದು ವೈರಲ್ ಆಗಿತ್ತು. ಆದರೇ ಅದು ನಕಲಿ ಎಂಬುದಾಗಿ ಕೆಪಿಸಿಸಿ ಸ್ಪಷ್ಟ ಪಡಿಸಿದೆ.
ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಬಿಡುಗಡೆ ಮಾಡಿದ್ದಾರೆ ಎನ್ನಲಾದಂತ ಕರ್ನಾಟಕ ವಿಧಾನಸಭೆಯ 3 ಉಪ ಚುನಾವಣೆಗಳ ಅಭ್ಯರ್ಥಿಗಳ ಪಟ್ಟಿಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಅದರಲ್ಲಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಕ್ಕೆ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ನೀಡಿದ್ದರೇ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನ್ನಪೂರ್ಣ ತುಕಾರಾಂ ಅವರಿಗೆ ಟಿಕೆಟ್ ನೀಡಿರುವುದಾಗಿ ಘೋಷಲಾಗಿದೆ ಎಂದು ಹೇಳಲಾಗಿತ್ತು.
ಈ ಬಗ್ಗೆ ಸ್ಪಷ್ಟನೆ ನೀಡಿರುವಂತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು, ವೈರಲ್ ಆಗಿರುವಂತ ಪಟ್ಟಿಯು ನಕಲಿಯಾಗಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಗಳಿಗೆ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.