Ad imageAd image

ಕರ್ನಾಟಕದ ರಾಜ್ಯಪಾಲರು ನಂಬರ್ ಒನ್ ಕಳ್ಳ : ಬೆಮೆಲ್ ಕಾಂತರಾಜು ಆರೋಪ

Bharath Vaibhav
ಕರ್ನಾಟಕದ ರಾಜ್ಯಪಾಲರು ನಂಬರ್ ಒನ್ ಕಳ್ಳ : ಬೆಮೆಲ್ ಕಾಂತರಾಜು ಆರೋಪ
WhatsApp Group Join Now
Telegram Group Join Now

ತುರುವೇಕೆರೆ: ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ತಮ್ಮ ಕಛೇರಿಯನ್ನು ಬಿಜೆಪಿ ಕಛೇರಿಯನ್ನಾಗಿ ಮಾಡಿಕೊಂಡು ಸಂವಿಧಾನಕ್ಕೆ ಕೊಳ್ಳಿ ಇಡುವಂತಹ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿರುವ ರಾಜ್ಯಪಾಲರು ನಂಬರ್ ಒನ್ ಕಳ್ಳ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಆರೋಪಿಸಿದರು.

ಪಟ್ಟಣದ ಜೆ.ಕೆ.ಕಂಫರ್ಟ್ ನಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಸ್ವಾಭಿಮಾನಿ ಸಾಧನಾ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನರ ಆರ್ಶೀವಾದದಿಂದ 136 ಸ್ಥಾನ ಪಡೆದು ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ ಸುಳ್ಳು ಆರೋಪಗಳನ್ನು ಮಾಡಿ ಸರ್ಕಾರಕ್ಕೆ, ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತರುವ ಪ್ರಯತ್ನವನ್ನು ಬಿಜೆಪಿ, ಜೆಡಿಎಸ್ ಪಕ್ಷಗಳು ಮಾಡುತ್ತಿವೆ. ಬಿಜೆಪಿ, ಜೆಡಿಎಸ್ ನಾಯಕರ ಮೇಲೆ ಸಾಕಷ್ಟು ಆರೋಪಗಳಿದ್ದು, ತನಿಖೆ ನಡೆದಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ. ಆದರೆ ಸಿದ್ದರಾಮಯ್ಯನವರ ಮೇಲೆ ಕೇವಲ ಸುಳ್ಳು ಆರೋಪಗಳು ಬಂದ ತಕ್ಷಣವೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಸಂವಿಧಾನಕ್ಕೆ ಕೊಳ್ಳಿ ಇಡುವ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ, ಮಹಿಳಾ ನಾಯಕಿ ಗೀತಾರಾಜಣ್ಣ, ಎಐಸಿಸಿ ಸದಸ್ಯ ಸುಬ್ರಮಣಿ ಶ್ರೀಕಂಠೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾಸ್ತಿಗೊಂಡನಹಳ್ಳಿ ದೇವರಾಜ್, ನಾಗರಾಜ್, ಪಕ್ಷದ ವಕ್ತಾರ ಮುರಳೀಧರ ಹಾಲಪ್ಪ, ವೀಕ್ಷಕ ಪಂಚಾಕ್ಷರಯ್ಯ, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಲಿಂಗರಾಜ್, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಅನಿಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಂಬರೀಶ್, ಸೇವಾದಳದ ಅಧ್ಯಕ್ಷ ಕೊಂಡಜ್ಜಿ ಕುಮಾರ್, ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಕಿಸಾನ್ ಘಟಕದ ಅಧ್ಯಕ್ಷರಾದ ಚಂದ್ರಶೇಖರ್, ನಟರಾಜ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನೂರುಲ್ಲಾ, ಒಬಿಸಿ ಘಟಕದ ಅಧ್ಯಕ್ಷ ಚೇತನ್, ಮುಖಂಡರಾದ ವಾಲೆ ಚಂದ್ರಯ್ಯ, ನಂಜುಂಡಪ್ಪ, ಭೈರಪ್ಪ, ವೇಣುಗೋಪಾಲ್ ಸೇರಿದಂತೆ ನೂರಾರು ಮಂದಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!