ಬೆಂಗಳೂರು: ಕರ್ನಾಟಕದ ಎರಡು ಕ್ಷೇತ್ರಗಳಿಗೆ ವಿಧಾನ ಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಎಐಸಿಸಿಯ ಜನರಲ್ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಅಸ್ಸಾಂನ ಒಂದು ಕ್ಷೇತ್ರ ಹಾಗೂ ಕರ್ನಾಟಕದ ಎರಡು ವಿಧಾನ ಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.
ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ. ಆದರೆ ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿಲ್ಲ.
ಅಂದಹಾಗೆ ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣಕ್ಕೆ ನವೆಂಬರ್.13ರಂದು ಮತದಾನ ನಡೆಯಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಕ್ಟೋಬರ್.25, 2024 ಕೊನೆಯ ದಿನವಾಗಿದೆ.
ನಾಮಪತ್ರ ಹಿಂಪಡೆಯಲು ಅಕ್ಟೋಬರ್.30, 2024 ಲಾಸ್ಟ್ ಡೇಟ್. ನವೆಂಬರ್.23ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಬಿಜೆಪಿಯಿಂದ ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷದಿಂದ ಟಿಕೆಟ್ ಘೋಷಣೆ ಆಗಬೇಕಿದೆ.