Ad imageAd image

ಬೆಳಗಾವಿ ಅಧಿವೇಶನಕ್ಕೆ “ಬರಾಕ್” ಓಕೆ ಅಂತಾರಾ.. : ಆಹ್ವಾನಕ್ಕೆ ರಾಜ್ಯ ಸರ್ಕಾರ ಚಿಂತನೆ 

Bharath Vaibhav
ಬೆಳಗಾವಿ ಅಧಿವೇಶನಕ್ಕೆ “ಬರಾಕ್” ಓಕೆ ಅಂತಾರಾ.. : ಆಹ್ವಾನಕ್ಕೆ ರಾಜ್ಯ ಸರ್ಕಾರ ಚಿಂತನೆ 
WhatsApp Group Join Now
Telegram Group Join Now

ಬೆಂಗಳೂರು: ಬೆಳಗಾವಿಯಲ್ಲಿ ಬರುವ ಡಿಸೆಂಬರ್‍ನಲ್ಲಿ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೇರಿಕದ ಮಾಜಿ ಅಧ್ಯಕ್ಷರಾದ ಬರಾಕ್ ಓಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ ಎಂದು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್‌ಕೆ ಪಾಟೀಲ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಶತಮಾನೋತ್ಸವ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಸಿಎಂ 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ.

“ಗಾಂಧೀ ಭಾರತ” ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಇದೇ ವೇಳೆ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷತೆ ವಹಿಸಿರುವ ಹೆಚ್‌ಕೆ ಪಾಟೀಲ ಹೇಳಿದರು.

ಬರುವ ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಜಂಟಿ ಅಧಿವೇಶನಕ್ಕೆ ಮಹಾತ್ಮಾ ಗಾಂಧೀಜಿಯವರನ್ನು ಜಗತ್ತಿನ ನಾಯಕ ಎಂದು ಕರೆದ ಬರಾಕ್ ಓಬಾಮಾ ಅವರನ್ನು ಆಹ್ವಾನಿಸಲು ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಬರಾಕ್ ಓಬಾಮಾ ಅವರಿಗೆ ಪತ್ರ ಬರೆದು ಆಗಮಿಸಲು ಕೋರುವುದಾಗಿ ತಿಳಿಸಿದ್ದಾರೆ ಎಂದರು.

1924 ರ ಡಿಸೆಂಬರ್ 26-27 ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಜರುಗಿದೆ. ಇದರ ನೆನಪನ್ನು ಮರುಸ್ಥಾಪಿಸಲು ಛಾಯಾಚಿತ್ರ ಪ್ರದರ್ಶನ, ಒಂದು ವರ್ಷ ಕಾಲ ವಸ್ತು ಪ್ರದರ್ಶನ, ಸ್ಮಾರಕ ಸ್ಥಂಭ ಸ್ಥಾಪನೆ ಮತ್ತಿತರ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶಗಳಿವೆ ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!