ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶಿಸಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ ನಡೆಸಿದರು.
ಭರ್ಜರಿ ರೋಡ್ ಶೋ ನಡೆಸಿದ ಬಳಿಕ ಸಿ.ಪಿ ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಿ.ಪಿ ಯೋಗೇಶ್ವರ್ ಅವರಿಗೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವರು ಸಾಥ್ ನೀಡಿದರು.
ಇತ್ತೀಚೆಗೆ ಸಿ.ಪಿ ಯೋಗೇಶ್ವರ್ ಬಿಜೆಪಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇಂದು ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.