Ad imageAd image

ಗೋವಾ ಮಾದರಿಯಲ್ಲೇ ರಾಜ್ಯದ ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಚಿಂತನೆ

Bharath Vaibhav
ಗೋವಾ ಮಾದರಿಯಲ್ಲೇ ರಾಜ್ಯದ ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಚಿಂತನೆ
WhatsApp Group Join Now
Telegram Group Join Now

ಮಂಗಳೂರು : ಕರ್ನಾಟಕದ ಬೀಚ್‌ಗಳಲ್ಲೂ ಗೋವಾ ಮಾದರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಯೋಜಿಸುತ್ತಿದ್ದೇವೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಕನೆಕ್ಟ್ 2024ನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೀಚ್​ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ.

ಹೊಸ ಪ್ರವಾಸೋದ್ಯಮ ನೀತಿಯು ಕರಾವಳಿ ಪ್ರವಾಸೋದ್ಯಮಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಹೊಂದಿರಲಿದೆ ಎಂದು ಹೇಳಿದರು.

ರಾಜ್ಯದ ಬೀಚ್‌ಗಳಲ್ಲೂ ಟೆಂಟ್‌​ಗಳನ್ನು ಹಾಕುವುದು, ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಟೆಂಟ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಬೀಚ್​ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುತ್ತೇವೆ. ಕಡಲತೀರಗಳಲ್ಲಿ ಹೆಚ್ಚಿನ ಲೈಟ್​ಗಳನ್ನು ಅಳವಡಿಸಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!