ವಿಜಯಪುರ: ದೇವಸ್ಥಾನಗಳಿಗೂ ವಕ್ಫ್ ಮಂಡಳಿಯವರು ನೋಟಿಸ್ ನೀಡುತ್ತಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಅಧಿಕಾರಿಗಳು ನೋಟಿಸ್ ನೀಡುತ್ತಿರುವುದಕ್ಕೆ ರೈತರು ಆತಂಕ ಪಡುವ ಅಗತ್ಯವಿಲ್ಲ.ಕಾನೂನು ವಿರುದ್ಧ ಹೋರಾಟ ನಡೆಸಲಾಗುವುದು. ನೋಟಿಸ್ ಬಂದರೆ ನಮ್ಮ ಕಚೇರಿಯನ್ನು ಸಂಪರ್ಕಿಸಿ ಎಂದು ರೈತರಿಗೆ, ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಯ ರೈತರು ಕೂಡ ನಮ್ಮ ಕಚೇರಿ ಸಂಪರ್ಕಿಸಬಹುದು. ನೋಟಿಸ್ ನೀಡಿದ್ದರ ಬಗ್ಗೆ ಕಾನೂನು ಹೋರಾಟಕ್ಕೆ ವಕೀಲರ ತಂಡ ರಚಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ರೈತರಿಗೆ ಜಾಗೃತಿ ಮೂಡಿಸಿ ಉಚಿತ ಕಾನೂನು ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.
ವಕ್ಫ್ ಕಾನೂನು ವಿರುದ್ಧ ಹೋರಾಟ ನಡೆಸಲಾಗುವುದು. ಜಿಲ್ಲೆಯಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಯಾವುದೇ ಆಸ್ತಿ ವಕ್ಫ್ ಗೆ ಸೇರ್ಪಡೆಯಾಗಿಲ್ಲ ಎನ್ನುತ್ತಿದ್ದಾರೆ.
ಈ ಹಿಂದೆ ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ ಮೊಹಮ್ಮದ್ ಮೊಹ್ಸೀನ್ ರೈತರ ಜಮೀನು ಪಹಣಿಯಲ್ಲಿ ವಕ್ಫ್ ಹೆಸರು ಹಾಕಿ ಹೋಗಿದ್ದಾರೆ. ಅವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದೆ. ಆದರೆ, ನಮ್ಮವರೇ ಯಡಿಯೂರಪ್ಪ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದ್ದಾರೆ.