ಬೆಂಗಳೂರು : ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಅಕ್ಟೋಬರ್ 28 ರ ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ.
ಈ ಕುರಿತು ರಾಜ್ಯ ಸರ್ಕಾರದಿಂದ ಸೂಚನಾ ಪತ್ರ ಹೊರಡಿಸಲಾಗಿದ್ದು, ದಿನಾಂಕ: 24.10.2024, ಗುರುವಾರ ಬೆಳಿಗ್ಗೆ 11:00 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2024ನೇ ಸಾಲಿನ 22ನೇ ಸಚಿವ ಸಂಪುಟ ಸಭೆಯನ್ನು ದಿನಾಂಕ: 28.10.2024, ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಮುಂದೂಡಲಾಗಿದ್ದು, ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಸಿಎಂ ಸಿದ್ಧರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ಪ್ರಣಾಣಿಕೆಯಲ್ಲಿ ಘೋಷಿಸಿದಂತೆ ಜಾರಿಗೊಳಿಸುವುದಾಗಿ ಈ ಹಿಂದೆ ತಿಳಿಸಿದ್ದರು. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಅ.25ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಪ್ರಕಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.