ವಿಜಯಪುರ: ವಕ್ಫ್ ವಿರುದ್ಧ ಮೊದಲು ಹೋರಾಟ ಪ್ರಾರಂಭಿಸಿದ್ದೇ ನಾನು. ವಿಜಯೇಂದ್ರ ನನ್ನನ್ನು ತುಳಿಯಲು ಸಾಧ್ಯವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಕ್ಫ್ ದಂಗಲ್ ವಿಚಾರವಾಗಿ ರೈತರ ಅಹವಾಲು ಸ್ವೀಕರಿಸಲು ಬಿಜೆಪಿಯಿಂದ ಗೋವಿಂದ ಕಾರಜೋಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಹಾಲಿ ಸಂಸದ, ಶಾಸಕ ನಾನು ಇದ್ದೇನೆ. ನಮ್ಮನ್ನ ಹೊರಗಿಟ್ಟು ತಂಡ ರಚಿಸಿದ್ದಾರೆ. ಇದು ವಿಜಯೇಂದ್ರನ ತಂಡಕ್ಕೆ ನಾನು ಬಹಿಷ್ಕಾರ ಹಾಕಿದ್ದೇನೆ ಎಂದು ಕಿಡಿಕಾರಿದರು.
ತಂಡದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ಹರೀಶ್ ಪೂಂಜಾ, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಎಂಎಲ್‌ಸಿ ಅರುಣ್ ಶಹಾಪುರ ಹಾಗೂ ಮುಖಂಡ ಕಲ್ಮರುಡಪ್ಪ ಸೇರಿದಂತೆ ಹಲವು ಶಾಸಕರನ್ನು ತಂಡ ಒಳಗೊಂಡಿದೆ.
ಆದರೆ ವಿಜಯಪುರ ನಗರ ಶಾಸಕನಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಂಸದ ರಮೇಶ್ ಜಿಗಜಿಣಗಿಗೆ ತಂದಡಲ್ಲಿ ಸ್ಥಾನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.