ಸಿಂಧನೂರು : -ನಗರದಲ್ಲಿ ನವಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ತಾಸಿಲ್ದಾರ್ ಅರುಣ್ ಕೆ ದೇಸಾಯಿ ಅವರು ತಿಳಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವದ ಇಂದಿನ ದಿನ ಸರ್ಕಾರಿ ಕಛೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಕಾರ್ಯಕ್ರಮವು ಅಚ್ಚುಕಟ್ಟಾಗಿ ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು .
ಕಾರ್ಯಕ್ರಮದ ಸ್ಥಳ ಸ್ವಚ್ಛತೆ ಹಾಗೂ ಅತಿಥಿಗಳಿಗೆ ಆಸನ ವ್ಯವಸ್ಥೆ ಅಲ್ಪ ಉಪಹಾರ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದ್ದು ವೇದಿಕೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಾಡಗೀತೆ ವಿದ್ಯಾರ್ಥಿಗಳಿಂದ ಸಮೂಹ ಗೀತೆ ಗಾಯನ ಮತ್ತು ನೃತ್ಯ ಗೌರವಂದನೆಗಳು ಪೊಲೀಸ್ ಕವಾಯತು ಬೆಳಗ್ಗೆ 9:00ಗೆ ತಹಸೀಲ್ ಕಚೇರಿಯಲ್ಲಿ ಧ್ವಜಾರೋಹಣ ಸಲ್ಲಿಸಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ಕುಷ್ಟಗಿ ರಸ್ತೆಯಲ್ಲಿರುವ ತಾಲೂಕ ಕ್ರೀಡಾಂಗಣಕ್ಕೆ ತಲುಪಿ ಕಾರ್ಯಕ್ರಮ ನಿರ್ವಹಿಸುವುದು ಎಂದು ತಾಸಿಲ್ದಾರ್ ಅರುಣ್. ಕೆ.ದೇಸಾಯಿ ತಿಳಿಸಿದರು..
ವರದಿ:- ಬಸವರಾಜ ಬುಕ್ಕನಹಟ್ಟಿ




