Ad imageAd image

ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿದೆ: ಸಿದ್ದರಾಮಯ್ಯ 

Bharath Vaibhav
ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿದೆ: ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನಿರ್ಣಯವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದ್ದೇವೆ. ಮೀಸಲಾತಿಯ ಹಂಚಿಕೆ, ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಹಾಗೂ ಇನ್ನಿತರೆ ವಿಷಯಗಳಲ್ಲಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಏಕಸದಸ್ಯ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಈ ಆಯೋಗಕ್ಕೆ ವರದಿ ಸಲ್ಲಿಸಲು ಮೂರು ತಿಂಗಳ ಸಮಯ ನಿಗದಿ ಪಡಿಸಲಾಗಿದ್ದು, ವರದಿ ಸಲ್ಲಿಕೆಯಾಗುವವರೆಗೆ ರಾಜ್ಯ ಸಿವಿಲ್‌ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.

ಈ ವಿಚಾರವನ್ನು ನಿನ್ನೆಯ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ಆದಾಗ್ಯೂ, ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ಉದ್ಯೋಗಾಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.

ಈಗಾಗಲೇ ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳು ಮುಂದುವರಿಯಲಿದೆ. ಹೊಸ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಸೀಮಿತವಾಗಿ ಸಂಪುಟದಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ಕಾರವು ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

 

 

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!