ತುಮಕೂರು: ಭಾರತ ವೈಭವ ದಿನಪತ್ರಿಕೆಯ ತುರುವೇಕೆರೆ ತಾಲೂಕು ವರದಿಗಾರ ಗಿರೀಶ್ ಕೆ ಭಟ್ ಅವರಿಗೆ ತುರುವೇಕೆರೆ ತಾಲೂಕು ಆಡಳಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ತುರುವೇಕೆರೆ ತಾಲ್ಲೂಕು ಆಡಳಿತ, ಪಟ್ಟಣ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ೬೯ ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಗಿರೀಶ್ ಕೆ ಭಟ್ ಅವರ ಪತ್ರಿಕಾ ಮಾಧ್ಯಮದಲ್ಲಿನ ಸೇವೆಯನ್ನು ಗುರುತಿಸಿ “ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಶಾಸಕ ಎಂ.ಟಿ. ಕೃಷ್ಣಪ್ಪ, ತಹಸೀಲ್ದಾರ್ ಕುಂಇ ಅಹಮದ್, ಕಸಾಪ ಅಧ್ಯಕ್ಷ ಡಿ.ಪಿ.ರಾಜು, ಪಪಂ ಅಧ್ಯಕ್ಷೆ ಆಶಾರಾಜಶೇಖರ್, ಉಪಾಧ್ಯಕ್ಷೆ ಭಾಗ್ಯಮಹೇಶ್, ಸದಸ್ಯರಾದ ಎನ್.ಆರ್.ಸುರೇಶ್, ಚಿದಾನಂದ್, ಆರ್.ಮಧು, ಇನ್ನರ್ ವೀಲ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷೆ ಗೀತಾಸುರೇಶ್, ಇಒ ಶಿವರಾಜಯ್ಯ, ನೌಕರರ ಸಂಘದ ಅಧ್ಯಕ್ಷ ನಂ.ರಾಜು, ಪಪಂ ಮುಖ್ಯಾಧಿಕಾರಿ ಶ್ರೀನಾಥ್ ಬಾಬು ಸೇರಿದಂತೆ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.




