ಬೆಂಗಳೂರು : ವಿಧಾನಮಂಡಲದ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಆಹ್ವಾನ ನೀಡಿ ರಾಜ್ಯ ಸರ್ಕಾರ ಪತ್ರ ಬರೆದಿದೆ.
ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಪತ್ರ ಬರೆದು ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಒಬಾಮರ ಮೂಲಕ ಗಾಂಧೀಜಿ ಬಗ್ಗೆ ಮಹತ್ವದ ಸಂದೇಶ ಸಾರಲು ಸರ್ಕಾರ ನಿರ್ಧರಿಸಿದೆ . ಸಚಿವ ಹೆಚ್ ಕೆ ಪಾಟೀಲ್ ಬರಾಕ್ ಒಬಾಮರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದೆ.