ಹುಬ್ಬಳ್ಳಿ: ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್ ಅಧಿಕಾರಿಯೇ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿ ಕೊನೆಗೆ ಸಾರ್ವಜನಿಕರ ಕೈಯಲ್ಲಿ ಪೆಟ್ಟು ತಿಂದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್ ಅನ್ನು ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹುಬ್ಬಳ್ಳಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಖಾದೀಮನವರ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಕಾನ್ಸ್ಟೇಬಲ್ ಅಕ್ಕಪಕ್ಕದಲ್ಲಿ ವಾಸವಿದ್ದ ಬಾಲಕಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಆತನನ್ನು ಹಿಡಿದು ನಡುರಸ್ತೆಯಲ್ಲಿಯೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಾನ್ಸ್ಟೇಬಲ್ ಬಟ್ಟೆಯೆಲ್ಲಾ ಹರಿದು ಹೋಗುವಂತೆ ಸಾರ್ವಜನಿಕರು ಗೂಸಾ ನೀಡಿದ್ದಾರೆ.
ಬಳಿಕ ಪೋಲಿಸಪ್ಪನನ್ನು ಕೇಶ್ವಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ನಂತರ ಕೇಶ್ವಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.